ಚಿಕಿತ್ಸೆ ನೆಪದಲ್ಲಿ ಭದ್ರಾವತಿಯಲ್ಲಿ ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ, ಅರೆಸ್ಟ್

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 DECEMBER 2020

ಚಿಕಿತ್ಸೆ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈದ್ಯನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಭದ್ರಾವತಿಯ ಓಲ್ಡ್ ಟೌನ್‍ ಪೊಲೀಸ್ ಠಾಣೆ ವ್ಯಾಪ್ತಿಯ ಖಾಜಿ ಮೊಹಲ್ಲಾದ ಮೂಲವ್ಯಾಧಿ ವೈದ್ಯ ಡಾ.ಅನಿಮೇಶ್ ಬಿಸ್ವಾಸ್ ಬಂಧಿತ. ಚಿಕಿತ್ಸೆಗೆ ತೆರಳಿದ್ದ ವೇಳೆ ವೈದ್ಯರು ಬಟ್ಟೆ ಬಿಚ್ಚುವಂತೆ ಹೇಳಿ, ತಾವೆ ಬಟ್ಟೆಯನ್ನು ಎಳೆದು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ವೈದ್ಯರು ಪಾನಮತ್ತರಾಗಿದ್ದದ್ದು ತಿಳಿಯಿತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಡಾ.ಅನಿಮೇಶ್ ಬಿಸ್ವಾಸ್ ಅವರು ಮತ್ತೊಬ್ಬ ಮಹಿಳೆಗೆ ಇದೆ ರೀತಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಫ್‍ಐಆರ್‍ನಲ್ಲಿ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 354, 354ಎ(1), 354(ಬಿ), 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವೈದ್ಯನನ್ನು ಬಂಧಿಸಲಾಗಿದೆ. ಓಲ್ಡ್ ಟೌನ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Kalleshwara-Enterprises.webp

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment