ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2025
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಈಗ ವೈದ್ಯರೊಬ್ಬರ (Doctor) ಬೈಕ್ ಕಳುವಾಗಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ. ಭಾರ್ಗವ್ ಎಂಬುವವರ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನವಾಗಿದೆ. ಡಾ. ಭಾರ್ಗವ್ ಅವರು ಜ.23ರಂದು ರಾತ್ರಿ 8.45ಕ್ಕೆ ಮೆಗ್ಗಾನ್ ಆಸ್ಪತ್ರೆ ಆಡಳಿತ ಭವನದ ಮುಂಭಾಗ ರಾಯಲ್ ಎನ್‌ಫೀಲ್ಡ್ ಬೈಕ್ ನಿಲ್ಲಿಸಿ ಕರ್ತವ್ಯಕ್ಕೆ ತೆರಳಿದ್ದರು. ರಾತ್ರಿ 9.30ರ ಹೊತ್ತಿಗೆ ಗಮನಿಸಿದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಎಲ್ಲೆಡೆ ಹುಡುಕಿದ ಡಾ. ಭಾರ್ಗವ್, ದೂರು ನೀಡಿದ್ದಾರೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ರಾಯಲ್ ಎನ್‌ಫೀಲ್ಡ್ ಬೈಕ್ ಕಳುವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು















