ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 JUNE 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ಕರ್ಫ್ಯೂ ನಿಯಮದ ಪಾಠ ಮಾಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡರು.
ಅನಾಗತ್ಯ ಓಡಾಡುತ್ತಿದ್ದವರು ವಶಕ್ಕೆ
ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬಿ.ಹೆಚ್.ರಸ್ತೆ, ಸಹ್ಯಾದ್ರಿ ಕಾಲೇಜು ಬಳಿ, ಎಂಆರ್‌ಎಸ್ ಸರ್ಕಲ್ ಸೇರಿದಂತೆ ವಿವಿಧೆಡೆ ವಾಹನ ತಪಾಸಣೆ ನಡೆಸಿದರು. ಈ ವೇಳೆ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಇದರಲ್ಲಿ ಬಹುತೇಕ ಯುವಕರೆ ಇದ್ದರು.
ನಿಯಮದ ಕ್ಲಾಸ್, ಮಿಡ್ ನೈಟ್ ಡ್ರಿಲ್
ವಶಕ್ಕೆ ಪಡೆದವರಿಗೆ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಅವರು ಕ್ಲಾಸ್ ತೆಗೆದುಕೊಂಡರು. ಕರ್ಫ್ಯೂ ನಿಯಮ, ಅದನ್ನು ಉಲ್ಲಂಘಿಸಿದರೆ ಆಗುವ ಪರಿಣಾಮದ ಬಗ್ಗೆ ವಿವರಿಸಿದರು. ಬಳಿಕ ನಿಮಯ ಉಲ್ಲಂಘಿಸಿದವರಿಗೆ ಪೊಲೀಸ್ ಠಾಣೆ ಆವರಣದಲ್ಲೇ, ನಡುರಾತ್ರಿಯಲ್ಲೆ ಡ್ರಿಲ್ ಮಾಡಿಸಲಾಯಿತು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ನಿಯಮ ಉಲ್ಲಂಘಿಸಿದವರ ಕಾರು, ಬೈಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಡ್ರಿಂಗ್ ಅಂಡ್ ಡ್ರೈವ್ ಮಾಡಿದವರಿಗೆ ಕೇಸ್ ಹಾಕಲಾಯಿತು.
ಕೋಟೆ ಠಾಣೆ ಮತ್ತು ಡಿಎಅರ್ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.