ಹರಿಗೆ ಬಳಿ ಚಾಲಕನನ್ನು ಬಸ್ಸಿನಿಂದ ಕೆಳಗೆ ಎಳೆದು ಹಲ್ಲೆ , ಕಾರಣವೇನು?

ಶಿವಮೊಗ್ಗ: ಹರಿಗೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ. ಬಸ್ ಚಾಲಕ ಗೌತಮ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಗೌತಮ್ ಅವರು ಹರಿಗೆ ಬಸ್ ನಿಲ್ದಾಣದಲ್ಲಿ ಬಸ್‌ಗೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದರು. ಈ ವೇಳೆ ಕೆಲವರು ಗೌತಮ್ ಅವರನ್ನು ಡ್ರೈವರ್ ಸೀಟಿನಿಂದ ಕೆಳಗೆ ಎಳೆದು, ಇಲ್ಲಿ ಯಾಕೆ ಬಸ್ ನಿಲ್ಲಿಸುತ್ತೀಯಾ ಎಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

070426-Tunga-Nagara-Police-Station-General-Image.avif

ಹಲ್ಲೆ ವೇಳೆ ಗೌತಮ್ ಅವರ ತುಟಿಗೆ ಗಾಯವಾಗಿದೆ. ಗಲಾಟೆಯ ಮಧ್ಯೆ ಗೌತಮ್ ಧರಿಸಿದ್ದ 20 ಗ್ರಾಂ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: