ರಾಗಿಗುಡ್ಡದಲ್ಲಿ ಪೊಲೀಸ್‌ ದಾಳಿ, ಅಜರುದ್ದೀನ್‌ ಅರೆಸ್ಟ್‌, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನಗರದ ರಾಗಿಗುಡ್ಡ ಚಾನಲ್ ಏರಿ ರಸ್ತೆಯ ಖಾಲಿ ಲೇಔಟ್‌ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ರಾಗಿಗುಡ್ಡ ನಿವಾಸಿ ಅಜರುದ್ದೀನ್ ಯಾನೆ ಅಜರ್ (26) ಬಂಧಿತ ಆರೋಪಿ. ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಖಾಂಡಿಕೆ ನೇತೃತ್ವದ ತಂಡ ದಾಳಿ ನಡೆಸಿದೆ.

Police-nab-Azaruddin-at-Ragigudda-layout-in-Shimoga.

ಬಂಧಿತನಿಂದ ₹1.50 ಲಕ್ಷ ಮೌಲ್ಯದ 15 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್ ಹಾಗೂ ಮಾದಕ ವಸ್ತು ಮಾರಾಟದಿಂದ ಬಂದಿದ್ದ ₹1,600 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.