ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ವಾಹನ ಸಂಚಾರ ಸುರಕ್ಷತೆಯನ್ನು (traffic violators) ಹೆಚ್ಚಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ITMS) ಮೂಲಕ ಇ-ಚಲನ್ ವ್ಯವಸ್ಥೆಯನ್ನು ಏಪ್ರಿಲ್ ತಿಂಗಳಿಂದ ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?
ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಸವಾರರನ್ನು ಕೇವಲ ರಸ್ತೆಯಲ್ಲಿ ತಡೆದು ದಂಡ ವಿಧಿಸುವುದು ಮಾತ್ರವಲ್ಲದೆ, ತಂತ್ರಜ್ಞಾನದ ಮೂಲಕವೂ ಪತ್ತೆಹಚ್ಚಲಾಗುತ್ತದೆ. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ ಜಿಪಿಎಸ್ ಆಧಾರಿತ ಕ್ಯಾಮೆರಾಗಳ ಮೂಲಕ ನಿಯಮ ಬಾಹಿರವಾಗಿ ಚಲಿಸುವ ವಾಹನಗಳ ಫೋಟೋ ಸೆರೆಹಿಡಿಯಲಿದ್ದಾರೆ. ಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ (PDA) ಮಿಷನ್ ಹೊಂದಿರುವ ಎಎಸ್ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್ https://echallan.parivahan.gov.in/index/accused-challan ಮೂಲಕವಿ ದಂಡದ ವಿವರ ವೀಕ್ಷಿಸಿ, ಆನ್‌ಲೈನ್ ಮೂಲಕವೇ ಹಣ ಪಾವತಿಸಬಹುದಾಗಿದೆ ಎಂದು ತಿಳಿಸಲಾಗಿದೆ.

LATEST NEWS
- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














