ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JUNE 2024
SHIMOGA : ವಿದ್ಯಾರ್ಥಿನಿಯೊಬ್ಬಳ (ಹೆಸರು, ಊರು ಗೌಪ್ಯ) ಫೋಟೊವನ್ನು ಅಶ್ಲೀಲವಾಗಿ ಎಡಿಟ್ (Edited) ಮಾಡಿ ಇನ್ಸ್ಟಾಗ್ರಾಂನಲ್ಲಿ ಅಕೌಂಟ್ ಸಿದ್ದಪಡಿಸಿ ಸ್ನೇಹಿತರಿಗೆ ರಿಕ್ವೆಸ್ಟ್ ಕಳುಹಿಸಲಾಗಿದೆ. ಅಲ್ಲದೆ ಈ ಮೇಲ್ ಮೂಲಕವು ವಿದ್ಯಾರ್ಥಿನಿಗೆ ಮೆಸೇಜ್ ಕಳುಹಿಸಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯೊಬ್ಬಳ ಸ್ನೇಹಿತೆಗೆ ಇನ್ಸ್ಟಾಗ್ರಾಂನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಅದನ್ನು ಅಕ್ಸೆಪ್ಟ್ ಮಾಡಿದಾಗ ವಿದ್ಯಾರ್ಥಿನಿಯ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿರುವ ಫೋಟೊವನ್ನು ಪೋಸ್ಟ್ ಮಾಡಲಾಗಿತ್ತು. ರಾತ್ರಿ ವೇಳೆಗೆ ವಿದ್ಯಾರ್ಥಿನಿಯ ಜಿ ಮೇಲ್ ಖಾತೆಗೆ ಈ ಮೇಲ್ ಮೂಲಕ ಮೆಸೇಜ್ ಕಳುಹಿಸಲಾಗಿತ್ತು. ಮನನೊಂದ ವಿದ್ಯಾರ್ಥಿನಿ ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪ ಸಾಬೀತಾದರೆ ಜೈಲು ಫಿಕ್ಸ್
ಕೃತ್ಯ ಎಸಗಿದಾತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅನುಮತಿ ಇಲ್ಲದೆ ಪೋಟೊ ಬಳಕೆ ಅಪರಾಧ. ಯಾರದ್ದೋ ಫೋಟೊ ಬಳಕೆ, ನಕಲಿ ಖಾತೆಗಳನ್ನು ಸೃಷ್ಟಿಸುವಂತಿಲ್ಲ. ಕಾಯ್ದೆ ಸೆಕ್ಷನ್ 66 ಸಿ, 66 ಡಿ, 67 ಅಡಿ ಪ್ರಕರಣ ದಾಖಲಾಗಿದೆ.
ಆರೋಪ ಸಾಬೀತಾದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿದವನಿಗೆ ಸೆಕ್ಷನ್ 66ಸಿ ಅಡಿ ಮೂರು ವರ್ಷ ಜೈಲು ಮತ್ತು ಒಂದು ಲಕ್ಷ ರೂ.ವರೆಗೆ ದಂಡ ಮತ್ತು 66 ಡಿ ಅಡಿ ಮೂರು ವರ್ಷ ಜೈಲು, ಒಂದು ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಐಟಿ ಕಾಯ್ದೆ ಸೆಕ್ಷನ್ 67 ಅಡಿ ಆರೋಪ ಸಾಬೀತಾದಲ್ಲಿ ಮೂರು ವರ್ಷ ಜೈಲು ಮತ್ತು ಐದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಟ ದರ್ಶನ್ ವಿರುದ್ಧ ಆಕ್ರೋಶ, ವೀರಶೈವ ಸಮಾಜದಿಂದ ಹೋರಾಟ, ಯಾರೆಲ್ಲ ಏನೇನು ಹೇಳಿದರು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






