ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಕುವಾಗ ಹುಷಾರ್, ಇನ್‌ಸ್ಟಾಗ್ರಾಂನಲ್ಲಿ ರಿಕ್ವೆಸ್ಟ್‌ಗೆ ಒಪ್ಪಿಗೆ ಕೊಟ್ಟ ವಿದ್ಯಾರ್ಥಿನಿಗೆ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRURARY 2023

SHIMOGA : ವಿದ್ಯಾರ್ಥಿನಿಯೊಬ್ಬಳ ಫೋಟೊಗಳನ್ನು ಎಡಿಟ್ (Edited Photo) ಮಾಡಿ ಆಶ್ಲೀಲವಾಗಿ ಇನ್​ಸ್ಟಾಗ್ರಾಂ ಖಾತೆಯೊಂದರಲ್ಲಿ ಅಪ್ ಲೋಡ್ ಮಾಡಲಾಗಿದೆ. ‘ನೀನು ನಿನ್ನ ಕುಟುಂಬದವರು ಸಾಯುವ ತನಕ ಇದು ಮುಂದುವರೆಯಲಿದೆ’ ಎಂದು ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾಳೆ.

Instagram User

ಏನಿದು ಪ್ರಕರಣ?

ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿಯ (ಹೆಸರು ಗೌಪ್ಯ) ಇನ್​ಸ್ಟಾಗ್ರಾಂ ಖಾತೆಗೆ ಫೆ.11ರಂದು ಸಂಜೆ ಮತ್ತೊಂದು ಇನ್​ಸ್ಟಾಗ್ರಾಂ ಖಾತೆಯಿಂದ ರಿಕ್ವೆಸ್ಟ್ ಬಂದಿದೆ. ಪರಿಚಿತರೋ, ಸಂಬಂಧಿಯೋ ಇರಬೇಕು ಎಂದು ವಿದ್ಯಾರ್ಥಿನಿ ರಿಕ್ವೆಸ್ಟ್ ಗೆ ಒಪ್ಪಿಗೆ ಸೂಚಿಸಿದ್ದಾರೆ. ಮರುದಿನ ವಿದ್ಯಾರ್ಥಿನಿಯ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ (Edited Photo) ಮಾಡಿ ಆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಅಪ್ ಲೋಡ್ ಮಾಡಲಾಗಿತ್ತು.

ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ

ಈ ಫೋಟೊಗಳನ್ನು ವಿದ್ಯಾರ್ಥಿನಿಯ ಸಂಬಂಧಿಗಳಿಗು ಕಳುಹಿಸಲಾಗಿತ್ತು. ‘ನೀನು, ನಿನ್ನ ಕುಟುಂಬದವರು ಸಾಯುವವರೆಗೂ ನಾನು ಈ ರೀತಿ ಮಾಡುವುದು ನಿಲ್ಲಿಸುವುದಿಲ್ಲ’ ಎಂದು ಬೆದರಿಕೆಯ ಮೆಸೇಜನ್ನು ಕಳುಹಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ‘ರಾತ್ರಿ 11 ಗಂಟೆಗೆ ಮನೆ ಕರೆಂಟ್ ಕಟ್’, SMS ನಂಬಿದ ಶಿವಮೊಗ್ಗದ ಡಾಕ್ಟರ್ ಗೆ ಕಾದಿತ್ತು ದೊಡ್ಡ ಆಘಾತ

ಫೋಟೊಗಳ ಬಗ್ಗೆ ಇರಲಿ ನಿಗಾ

ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ, ವಿಡಿಯೋಗಳನ್ನು ಷೇರ್ ಮಾಡುವಾಗ ಎಚ್ಚರವಿರಲಿ. ವೈಯಕ್ತಿಕ ಹಗೆ ತೀರಿಸಿಕೊಳ್ಳುವುದು, ಹಣ ಅಥವಾ ಇತರೆ ಉದ್ದೇಶಕ್ಕೆ ಬ್ಲಾಕ್ ಮೇಲ್ ಮಾಡಲು ಫೋಟೊಗಳನ್ನು ಎಡಿಟ್ ಮಾಡಿ, ಕಿಡಿಗೇಡಿಗಳು ದುರುಪಯೋಗ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಯುವತಿಯರು, ಮಹಿಳೆಯರು ಹೆಚ್ಚು ನಿಗಾ ವಹಿಸುವುದು ಅಗತ್ಯ. ಅಲ್ಲದೆ ಅಪರಿಚಿತರ ಫ್ರೆಂಡ್ ರಿಕ್ವೆಸ್ಟ್ ಗೆ ಒಪ್ಪಿಗೆ ಕೊಡುವಾಗ ಎಚ್ಚರ ವಹಿಸಬೇಕಿದೆ.

JNNCE College Shimoga VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment