ಕಂಬದ ಮೇಲೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಕೆಳಗೆ ಬಿದ್ದು ಸಾವು, ಶಿವಮೊಗ್ಗದಲ್ಲಿ ಪ್ರಕರಣ ದಾಖಲು

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | 16 APRIL 2023

SHIMOGA : ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ (Shock) ಲೈನ್ ಮ್ಯಾನ್ ಒಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಹಾಲಸ್ವಾಮಿ (27) ಎಂದು ಗುರುತಿಸಲಾಗಿದೆ.

crime name image

ಹೇಗಾಯ್ತು ಘಟನೆ?

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‍ನಲ್ಲಿ ವಿದ್ಯತ್ ಲೈನ್ ದುರಸ್ಥಿ ಕಾರ್ಯ ನಡೆಯುತ್ತಿತ್ತು. ಲೈನ್ ಮ್ಯಾನ್ ಹಾಲಸ್ವಾಮಿ ಅವರು ಕಂಬದ ಮೇಲೆ ಹತ್ತಿ ರಿಪೇರಿ ಕೆಲಸ ಮಾಡತ್ತಿದ್ದರು. ಈ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿದೆ. ಶಾಕ್ (Shock) ಹೊಡೆದು ಹಾಲಸ್ವಾಮಿ ಅವರು ಕಂಬದಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೆ ಅವರು ಅಸುನೀಗಿದ್ದರು.

ಇದನ್ನೂ ಓದಿ – ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಹಿಟ್ ಅಂಡ್ ರನ್‍ ಅಪಘಾತ, ಒಬ್ಬ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಸೂಕ್ತ ರಕ್ಷಣಾ ಸಾಮಗ್ರಿಗಳು, ಸುರಕ್ಷತಾ ಕ್ರಮ ಕೈಗೊಳ್ಳದೆ ಎತ್ತರದ ಜಾಗದಲ್ಲಿ ಕೆಲಸ ನಿರ್ವಹಿಸುವಂತೆ ಮಾಡಿದ್ದರಿಂದಲೇ ಘಟನೆ ಸಂಭವಿಸಿದೆ ಎಂದು ಹಾಲಸ್ವಾಮಿ ಅವರ ಕುಟುಂಬದವರು ಆರೋಪಿಸಿದ್ದಾರೆ. ಘಟನೆ ಸಂಬಂಧ ಮೆಸ್ಕಾಂ ಜೆಇ, ಎಇಇ ಸೇರಿದಂತೆ ಹಲವರು ವಿರುದ್ಧ ಕುಟುಂಬದವರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Nammur-News-Whatsapp

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY, CRIME DIARY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಏಪ್ರಿಲ್ 16, 2023

Leave a Comment