ಬೆಳಗಿನ ಜಾವ ಬಂತು ಫೋನ್‌, ಮನೆ ಬಾಗಿಲು ಹೊರಗಿನಿಂದ ಆಗಿತ್ತು ಲಾಕ್‌, ಇಡೀ ಕುಟುಂಬಕ್ಕೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 FEBRUARY 2024

SHIMOGA : ಕುಟುಂಬದವರು ಮಲಗಿದ್ದಾಗ ಕಿಟಕಿಯಿಂದ ಕೈ ಹಾಕಿ ಮನೆಯ ಬಾಗಿಲು ತೆಗೆದ ಕಳ್ಳರು ನಗದು, ವಾಚ್‌, ಜರ್ಕಿನ್‌, ಮನೆ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕ್ ಕದ್ದೊಯ್ದಿದ್ದಾರೆ. ಶಿವಮೊಗ್ಗ ನಗರದ ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ.

ಹೇಗಾಯ್ತು ಕಳ್ಳತನ?

ಅಶೋಕ ನಗರದ ಶಿಕ್ಷಕ ಕೊಟ್ರಪ್ಪ ಎಂಬುವವರ ಮನೆಯಲ್ಲಿ ರಾತ್ರಿ ಎಲ್ಲರು ಊಟ ಮುಗಿಸಿ 11 ಗಂಟೆಗೆ ಮಲಗಿದ್ದರು. ರಾತ್ರಿ ಒಳಗೆ ನುಗ್ಗಿರುವ ಕಳ್ಳರು ಕೊಟ್ರಪ್ಪ ಅವರ ಕೊಠಡಿಯಲ್ಲಿದ್ದ ಬೀರುವಿನಿಂದ 43,800 ರೂ. ನಗದು, ಮಗನ ಬೆಡ್‌ ರೂಂನಲ್ಲಿರುವ ಬೀರುವಿನಿಂದ 4 ವಾಚ್‌, 2 ಜರ್ಕಿನ್‌, ಶೋಕೇಸ್‌ನಲ್ಲಿದ್ದ 3 ವಾಚ್‌, ರಾಯಲ್‌ ಎನ್‌ಫಿಲ್ಡ್‌ ಬೈಕ್‌ನ ಕೀ ಕದ್ದೊಯ್ದಿದ್ದಾರೆ. ಮನೆಯ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳ್ಳಂಬೆಳಗ್ಗೆ ಪಕ್ಕದ ಮನೆಯಿಂದ ಫೋನ್‌

ಪಕ್ಕದ ಮನೆಯಲ್ಲಿರುವ ಸಹೋದರ ಬೆಳಗ್ಗೆ ರೈಲಿಗೆ ತೆರಳಲು ಮನೆಯಿಂದ ಹೊರ ಬಂದಾಗ ಕೊಟ್ರಪ್ಪ ಅವರ ಮನೆಯ ಗೇಟ್‌ ತೆಗೆದಿತ್ತು. ಕಾಂಪೌಂಡ್‌ ಒಳಗಿರುವ ಬೈಕ್‌ ನಾಪತ್ತೆಯಾಗಿತ್ತು. ಕೂಡಲೆ ಕಟ್ರಪ್ಪ ಅವರಿಗೆ ಕರೆ ಮಾಡಿದ್ದರು. ಕೊಟ್ರಪ್ಪ ಅವರ ಮನೆಯ ಮುಂಬಾಗಿಲು ಹೊರಗಿನಿಂದ ಚಿಲಕ ಹಾಕಲಾಗಿತ್ತು. ಹಾಗಾಗಿ ಹಿಂಬದಿ ಬಾಗಿಲಿನಿಂದ ಹೊರ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.

ಕಳ್ಳರು ಕಿಟಕಿಯಿಂದ ಒಳಗೆ ಕೈ ಹಾಕಿ ಬಾಗಿಲಿನ ಚಿಲಕ ತೆಗೆದು ಕಳ್ಳತನ ಮಾಡಿದ್ದಾರೆ ಎಂದು ಕೊಟ್ರಪ್ಪ ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 12, 2024

Leave a Comment