ಶಿವಮೊಗ್ಗ: ನಗರದ ಉಷಾ ನರ್ಸಿಂಗ್ ಸರ್ಕಲ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಕಾರಿನಿಂದ ಲಕ್ಷಾಂತರ ರೂಪಾಯಿ ನಗದು ಕಳುವಾಗಿರುವ ಘಟನೆ ನಡೆದಿದೆ. ಕೆಲಸದ ಒತ್ತಡದಲ್ಲಿ (engineer) ಕಾರು ಲಾಕ್ ಮಾಡುವುದನ್ನು ಮರೆತಿದ್ದೇ ಕಳ್ಳತನಕ್ಕೆ ಕಾರಣವಾಗಿದೆ.
ಇಂಜಿನಿಯರ್ ಹಾಲೇಶ್ (34) ಎಂಬುವವರು ಹಣ ಕಳೆದುಕೊಂಡ ದುರ್ದೈವಿ. ಹಾಲೇಶ್ ಅವರು ತಮ್ಮ ಫೋರ್ಡ್ ಕಾರಿನಲ್ಲಿ ಉಷಾ ಸರ್ಕಲ್ ಫ್ಲೈ ಓವರ್ ಕೆಳಭಾಗಕ್ಕೆ ಬಂದಿದ್ದರು. ಅಲ್ಲಿನ ನಿಸರ್ಗ ಹೋಟೆಲ್ನಲ್ಲಿ ತಿಂಡಿ ತಿನ್ನಲು ಹೋಗುವಾಗ, ಕೆಲಸದ ಅವಸರದಲ್ಲಿ ಕಾರಿನ ಬಾಗಿಲನ್ನು ಲಾಕ್ ಮಾಡದೆ ಹಾಗೆಯೇ ಬಿಟ್ಟು ಹೋಗಿದ್ದಾರೆ.
ತಿಂಡಿ ಮುಗಿಸಿ ಅಲ್ಲಿಂದ ತಮ್ಮ ಊರಿಗೆ ತೆರಳಿದ ನಂತರ ಕಾರಿನ ಡ್ಯಾಶ್ಬೋರ್ಡ್ ಪರಿಶೀಲಿಸಿದಾಗ, ಅದರಲ್ಲಿ ಇಟ್ಟಿದ್ದ ₹2,00,000ನಗದು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗಕ್ಕೆ ವಾಪಸಾಗಿ ಕಾರು ನಿಲ್ಲಿಸಿದ್ದ ಜಾಗದಲ್ಲಿ ಹುಡುಕಾಟ ನಡೆಸಿದರೂ ಹಣದ ಸುಳಿವು ಸಿಕ್ಕಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ