ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIVAMOGGA LIVE | 18 JUNE 2023
SHIMOGA : ಎಕ್ಸಿಕ್ಯೂಟಿವ್ ಇಂಜಿನಿಯರ್ (Engineer) ಒಬ್ಬರ ಪತ್ನಿಯ ಮೃತದೇಹ ಶಿವಮೊಗ್ಗದ ಮನೆಯಲ್ಲಿ ಪತ್ತೆಯಾಗಿದೆ. ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಕುರಿತು ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ – ಅಶ್ಲೀಲ ವಿಡಿಯೋ ವೈರಲ್ ಕೇಸ್, ತೀರ್ಥಹಳ್ಳಿ ಯುವಕ ಪೊಲೀಸ್ ವಶಕ್ಕೆ, ವಾಟ್ಸಪ್ ಬಳಕೆದಾರರಿಗೆ ಖಾಕಿ ವಾರ್ನಿಂಗ್
ಕಮಲಮ್ಮ (54) ಕೊಲೆಯಾದ ಮಹಿಳೆ. ವಿಜಯನಗರ ಎರಡನೇ ತಿರುವಿನಲ್ಲಿರುವ ಮನೆಯಲ್ಲಿ ಘಟನೆ ಸಂಭವಿಸಿದೆ. ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಮನೆಯಲ್ಲಿ ಇಲ್ಲದ ವೇಳೆ ಘಟನೆ ಸಂಭವಿಸಿದೆ.
ಮನೆಯಲ್ಲಿ ಯಾರೂ ಇರಲಿಲ್ಲ
ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಅವರು ಹೊಸದುರ್ಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ (Engineer) ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ನೇಹಿತರೊಂದಿಗೆ ಮಲ್ಲಿಕಾರ್ಜುನ ಅವರು ಗೋವಾಗೆ ಪ್ರವಾಸ ತೆರಳಿದ್ದರು. ಅಲ್ಲಿಂದ ಪತ್ನಿಗೆ ಹಲವು ಬಾರಿ ಕರೆ ಮಾಡಿದರು ಸ್ವೀಕರಿಸಿರಲಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಅಕ್ಕಪಕ್ಕದ ಮನೆಯವರಿಗೆ ಮಲ್ಲಿಕಾರ್ಜನ ಕರೆ ಮಾಡಿ ತಿಳಿಸಿದ್ದಾರೆ. ನೆರೆ ಮನೆಯವರು ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಶನಿವಾರ ಸಂಜೆ ವೇಳೆಗೆ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿಚಾರ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ದಾವಣಗೆರೆಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಶಿವಮೊಗ್ಗದ ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿದೆ. ಕೊಲೆಗೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.



