ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 ಗಾಂಜಾ ಗಿಡಗಳು ಪತ್ತೆಯಾಗಿವೆ.
ಜಮೀನು ಮಾಲೀಕನ ವಿರುದ್ಧ NDPS ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಉಪ ನಿರೀಕ್ಷಕ ಶಾಂತಕುಮಾರ್, ಸಿಬ್ಬಂದಿಗಳಾದ ರವೀಂದರ್, ನಾಗಪ್ಪ ಶಿರೋಳ್, ನಾಗಪ್ಪ, ಸುಜಾತಾ, ಮಧುಸೂದನ್, ಹೆಡ್ ಕಾನ್ಸ್ ಟೇಬಲ್ ಕೆಂಪರಾಮ, ವಾಹನ ಚಾಲಕ ನ್ಯಾನರಾಜ್ ಸೇರಿದಂತೆ ಹಲವು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200