ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021
ಸಾಗರ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾರಾಟಕ್ಕೆ ಇರಿಸಿದ್ದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಲ್ಲಿನ ಅರಮನೆ ಕೆರೆ ಸುಭಾಷ್ ನಗರದ ಕಟ್ಟಡವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊಹಮ್ಮದ್ ಫಾರೂಕ್ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಇಟ್ಟುಕೊಂಡಿರುವ ಖಚಿತ ಮಾಹಿತಿ ಲಭ್ಯವಾಗಿತ್ತು.
ಶೋಧ ಕಾರ್ಯ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ 1.230 ಕೆ.ಜಿ ಒಣ ಗಾಂಜಾ ಪತ್ತೆಯಾಗಿದೆ. ಪ್ಲಾಸ್ಟಿಕ್ ಕವರ್‍ನಲ್ಲಿ ಇರಿಸಿದ್ದ ಒಣ ಗಾಂಜಾ ಸಿಕ್ಕಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.
ಸಾಗರ ವಲಯ ಅಬಕಾರಿ ನಿರೀಕ್ಷಕ ಎಲ್.ಸಿ.ಸಂದೀಪ್, ಅಬಕಾರಿ ಉಪ ನಿರೀಕ್ಷಕ ಸಂತೋಷ್, ಅಬಕಾರಿ ಕಾನ್‍ಸ್ಟೇಬಲ್‍ಗಳಾದ ಗುರುಮೂರ್ತಿ, ಮುದಾಸಿರ್, ದೀಪಕ್, ಮಹಾಬಲೇಶ್, ಅರುಣ್ ಹಾಗೂ ವಾಹನ ಚಾಲಕ ಗಣಪತಿ ದಾಳಿಯಲ್ಲಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422