ನಾನು ಬ್ಯಾಂಕ್ ಮ್ಯಾನೇಜರ್ ಮಾತಾಡ್ತಿರೋದು ಅಂತಾ ಹೇಳಿ, ಸಾಗರದ ವ್ಯಕ್ತಿಯ ಖಾತೆಯಿಂದ 1.65 ಲಕ್ಷ ನುಂಗಿದ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24  MARCH 2021

ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಅಪರಿಚಿತನೊಬ್ಬ, ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ 1.65 ಲಕ್ಷ ರೂ. ವಂಚನೆ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಮೌಸ್ ಬುಕ್ ಮಾಡಲು ಹೋಗಿ 65 ಸಾವಿರ ಕಳೆದುಕೊಂಡ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿ

ಸಾಗರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತ, ತನ್ನನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ಖಾತೆಯಲ್ಲಿ ಎರಡು ಲಕ್ಷಕ್ಕಿಂತಲೂ ಹೆಚ್ಚಿಗೆ ಹಣವಿದೆ. 80 ಸಾವಿರ ರುಪಾಯಿಯನ್ನು ಡೆಪಾಸಿಟ್ ಮಾಡಿಕೊಳ್ಳುತ್ತೇವೆ. ಹತ್ತು ವರ್ಷದ ಬಳಿಕ ನಿಮಗೆ 1.40 ಲಕ್ಷ ರೂ. ಸಿಗಲಿದೆ ಎಂದು ತಿಳಿಸಿದ. ಆದರೆ ಸಾಗರದ ವ್ಯಕ್ತಿ ಇದಕ್ಕೆ ಒಪ್ಪದಿದ್ದಾಗ ಅಪರಿಚಿತ ವರಸೆ ಬದಲಿಸಿದ್ದ.

ವಂಚನೆಯ ಹೊಸ ಪ್ಲಾನ್ ರೆಡಿ

80 ಸಾವಿರ ರೂ. ಡೆಪಾಸಿಟ್ ಮಾಡಿಕೊಳ್ಳುವ ವಿಚಾರ ಕೈಬಿಟ್ಟ ವಂಚಕ, ಪ್ಲಾನ್ ಕ್ಯಾನ್ಸಲ್ ಮಾಡ್ತೀವಿ. ಅದಕ್ಕಾಗಿ ನಿಮ್ಮ ಮೊಬೈಲ್‍ಗೆ ಬಂದಿರುವ ಒಟಿಪಿ ಕಳುಹಿಸಿ ಎಂದು ತಿಳಿಸಿದ್ದಾನೆ. ಸಾಗರದ ವ್ಯಕ್ತಿ ಒಟಿಪಿ ಕಳುಹಿಸಿದ್ದಾರೆ. ಮರುದಿನ ಮತ್ತೆ ಕರೆ ಮಾಡಿದ ವಂಚಕ, ಮ್ಯಾನೇಜರ್ ಸೋಗಿನಲ್ಲಿ ಮಾತನಾಡಿದ, ಪುನಃ ಒಟಿಪಿ ಕೇಳಿದ್ದಾನೆ. ಸಾಗರದ ವ್ಯಕ್ತಿ ಒಟಿಪಿ ಒದಗಿಸಿದ್ದಾರೆ.

ಎಳು ಭಾರಿ ಒಟಿಪಿ ಪಡೆದ

ಡೂಪ್ಲಿಕೇಟ್ ಮ್ಯಾನೇಜರ್ ಒಟ್ಟು ಏಳು ಭಾರಿ ಒಟಿಪಿ ಪಡೆದುಕೊಂಡಿದ್ದಾನೆ. ಈ ಅವಧಿಯಲ್ಲಿ ಸುಮಾರು 1.65 ಲಕ್ಷ ರೂ. ಹಣವನ್ನು ಸಾಗರದ ವ್ಯಕ್ತಿಯ ಅಕೌಂಟ್‍ನಿಂದ ವರ್ಗಾವಣೆ ಮಾಡಿಕೊಂಡಿದ್ದಾನೆ. ಅನುಮಾನದ ಮೇರೆಗೆ ಸಾಗರದ ವ್ಯಕ್ತಿಯು ತಮ್ಮ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿದಾಗ ವಂಚನೆಗೊಳಗಾಗಿರುವುದು ತಿಳಿದು ಬಂದಿದೆ. ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಚ್ಚರ, ಕಟ್ಟೆಚ್ಚರ

ಬ್ಯಾಂಕ್ ಮ್ಯಾನೇಜರ್, ಬ್ಯಾಂಕ್ ಸಿಬ್ಬಂದಿ ಹೀಗೆ, ಹಲವು ಸೋಗಿನಲ್ಲಿ ವಂಚಕರು ಕರೆ ಮಾಡಿ, ಒಟಿಪಿ ಪಡೆದುಕೊಳ್ಳುತ್ತಾರೆ. ಯಾವುದೆ ಕಾರಣಕ್ಕೂ ಜನರು ಒಟಿಪಿ ಒದಗಿಸಬಾರದು ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಖಾತೆಯಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಬ್ಯಾಂಕ್‍ನ ಶಾಖೆಗೆ ತೆರಳಿ ನೇರವಾಗಿಯೇ ಬಗೆಹರಿಸಿಕೊಂಡರೆ ವಂಚಕರ ಬಲೆಗೆ ಬೀಳುವುದು ತಪ್ಪಲಿದೆ.

ಇದನ್ನೂ ಓದಿ | ಕೌನ್ ಬನೇಗಾ ಕರೋಡ್‌ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment