SHIMOGA | ಮಹಿಳೆಯೊಬ್ಬರ ಹೆಸರು, ಫೋಟೊ ಬಳಸಿ ನಕಲಿ ಫೇಸ್‌ಬುಕ್‌ ಖಾತೆ, ಆಶ್ಲೀಲ ಮೆಸೇಜ್, ಒಬ್ಬ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021

ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕೆಯ ಫೋಟೋಗಳನ್ನು ಅಪ್ ಲೋಡ್ ಮಾಡಿ, ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | CRIME | ಅಣ್ಣನಿಗೊಂದು ಸರಿ, ತಮ್ಮನಿಗೊಂದು ಸರಿ ಫೋನ್ ಮಾಡಿದರು, ಇಬ್ಬರ ಅಕೌಂಟ್’ನಿಂದಲೂ ದುಡ್ಡು ಲಪಟಾಯಿಸಿದರು

ಮೈಸೂರಿನ ನಂಜನಗೂಡಿನ ಸುಪ್ರೀತ್ (22) ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಮೊಬೈಲ್‍ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಶಿವಮೊಗ್ಗದ ಮಹಿಳೆಯೊಬ್ಬರ ಫೋಟೊ ಬಳಸಿಕೊಂಡು, ಫೇಸ್‍ಬುಕ್‍ನಲ್ಲಿ ನಕಲಿ ಖಾತೆ ತೆಗೆದು, ಅಶ್ಲೀಲವಾಗಿ ಮೆಸೇಜ್‍ಗಳನ್ನು ಕಳುಹಿಸುತ್ತಿದ್ದ. ವಿಚಾರ ತಿಳಿದು ಮಹಿಳೆಯು ಶಿವಮೊಗ್ಗದ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದನ್ನೂ ಓದಿ | ಫೇಸ್ ಬುಕ್ ಮೆಸೆಂಜರ್‌ನಲ್ಲಿ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್, ನಿಧಿಗೆ ಯುವಕ ಅರೆಸ್ಟ್

ಇನ್ಸ್ ಪೆಕ್ಟರ್ ಗುರುರಾಜ್‍ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗರಾಜ್, ಕುಮಾರ್ ಬಣಕಾರ್, ಸಲ್ಮಾ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಅರೋಪಿಯನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment