ಶಿವಮೊಗ್ಗ ಲೈವ್
ಶಿವಮೊಗ್ಗ: ಐಟಿಸಿ ಕಂಪನಿಯ ಹೆಸರಿನಲ್ಲಿ ನಕಲಿ ಸಿಗರೇಟ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಕೆ.ಆರ್. ಪುರಂ ಮುಖ್ಯ ರಸ್ತೆಯ ಅಂಗಡಿಯಲ್ಲಿ ನಕಲಿ ಸಿಗೇರೇಟ್ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ನಕಲಿ ಸಿಗರೇಟ್ಗಳನ್ನು ಐಟಿಸಿ ಕಂಪನಿಯ ನೈಜ ಉತ್ಪನ್ನಗಳ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಂಸ್ಥೆಯ ಪ್ರತಿನಿಧಿ ಮಳಿಗೆಗೆ ತೆರಳಿ ತಪಾಸಣೆ ನಡೆಸಿದ್ದರು. ಈ ವೇಳೆ ಅಂಗಡಿಯಲ್ಲಿ ನಕಲಿ ಐಟಿಸಿ ಸಿಗರೇಟ್ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವುದು ಖಚಿತವಾಗಿದೆ ಎಂದು ಆರೋಪಿಸಲಾಗಿದೆ. ನಕಲಿ ಸಿಗರೇಟ್ಗಳ ಮಾರಾಟದಿಂದ ಅಸಲಿ ಕಂಪನಿಗೆ ನಷ್ಟವಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
