ಶಿವಮೊಗ್ಗ ಪಾಲಿಕೆ ಅಧಿಕಾರಿಗೆ ಶಾಕ್ ಕೊಟ್ಟ ವಾಟ್ಸಾಪ್ ಕಾಲ್, ಏನಿದು ಪ್ರಕರಣ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಲೋಕಾಯುಕ್ತ ಇನ್‌ಸ್ಪೆಕ್ಟರ್ (Inspector) ಹೆಸರಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ಭ್ರಷ್ಟಾಚಾರದ ಆರೋಪ ಹೊರಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ರಂಗಸ್ವಾಮಿ.ಎಸ್.ಕೆ ಎಂಬುವವರು ದೂರು ನೀಡಿದ್ದಾರೆ. ಫೆಬ್ರವರಿ 2 ರಂದು ರಂಗಸ್ವಾಮಿ ಅವರು ಕಚೇರಿಯಲ್ಲಿದ್ದಾಗ ಅವರ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್ ವಾಯ್ಸ್ ಕಾಲ್ ಬಂದಿತ್ತು. ಆ ನಂಬರ್‌ನ ಪ್ರೊಫೈಲ್‌ನಲ್ಲಿ LOKAYUKTA RAVIPRAKASH C.I KSP ಎಂಬ ಹೆಸರಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರಂಗಸ್ವಾಮಿ ಅವರು ಮರಳಿ ಕರೆ ಮಾಡಿದಾಗ, ಮಾತನಾಡಿದ ವ್ಯಕ್ತಿಯು ತಾನು ಲೋಕಾಯುಕ್ತ ಇನ್‌ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದ. ನಿಮ್ಮ ಮೇಲೆ ಸಾರ್ವಜನಿಕರು ಭ್ರಷ್ಟಾಚಾರ ಮತ್ತು ಕೆಲಸ ವಿಳಂಬದ ದೂರು ನೀಡಿದ್ದಾರೆ. ಈ ಪ್ರಕರಣ ಇಲ್ಲಿಗೇ ಮುಕ್ತಾಯವಾಗು ಎಂದಾದರೆ ನನಗೆ ₹50,000 ಹಣ ನೀಡಬೇಕು. ಇಲ್ಲದಿದ್ದರೆ ಟ್ರ್ಯಾಪ್ ಮಾಡಿ ಜೈಲಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಪುನಃ ಮೂರ್ನಾಲ್ಕು ಬಾರಿ ಕರೆ ಮಾಡಿ ಹಾಗೂ ಮೆಸೇಜ್ ಮಾಡು ಹಣಕ್ಕಾಗಿ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Shimoga-Mahanagara-Palike-ambedkar-statue

ಪಾಲಿಕೆ ಅಧಿಕಾರಿ ರಂಗಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಅಲ್ಲಿನ ಅಧಿಕಾರಿಗಳ ಜೊತೆಗೆ ಚರ್ಚಿಸಿದಾಗ, ಕರೆ ಮಾಡಿದ ವ್ಯಕ್ತಿಯು ಲೋಕಾಯುಕ್ತ ಇನ್‌ಸ್ಪೆಕ್ಟರ್ ಅಲ್ಲ ಎಂಬುದು ದೃಢಪಟ್ಟಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

JNNCE-COLLEGE-ADVT.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment