ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 FEBRUARY 2024
SHIMOGA : ಸಕೆಂಡ್ಸ್ ಮದ್ಯ ಮಾರಾಟ ಮಾಡುತ್ತಿರುವ ದೂರು ಬಂದಿದೆ. ಅದರ ತನಿಖೆಗೆ ಬಂದಿದ್ದೇವೆ ಎಂದು ಮದ್ಯದ ಅಂಗಡಿಯೊಂದರಲ್ಲಿ ಮಾಲೀಕನ ಜೊತೆಗೆ ಜಗಳವಾಡಿದ ಇಬ್ಬರು ಯುವಕರು ಹಲ್ಲೆ ನಡೆಸಿದ್ದಾರೆ.
ಅಣ್ಣಾನಗರದ ವೈನ್ ಶಾಪ್ ಒಂದರಲ್ಲಿ ಘಟನೆ ಸಂಭವಿಸಿದೆ. ಅಂಗಡಿಗೆ ಆಗಮಿಸಿದ ಇಬ್ಬರು ಯುವಕರು, ಸಕೆಂಡ್ಸ್ ಮದ್ಯ ಮಾರಾಟ ಮಾಡುತ್ತಿರುವ ದೂರು ಬಂದಿದೆ. ಈ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಮಾಲೀಕನಿಗೆ ತಿಳಿಸಿದ್ದಾರೆ. ಒಂದು ವೇಳೆ ಉಚಿತವಾಗಿ ಮದ್ಯ ಕೊಟ್ಟರೆ ಸುಮ್ಮನೆ ಬಿಡುವುದಾಗಿ ಹೇಳಿದ್ದಾರೆ. ಮಾಲೀಕ ಒಪ್ಪದಿದ್ದಾಗ ಮದ್ಯದ ಬಾಟಲಿಗೆ ಕೈ ಹಾಕಿದ್ದರು. ಇದನ್ನು ತಡೆಯಲು ಮುಂದಾದಾಗ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್, ಕಂಡಕ್ಟರ್ ಮೇಲೆ ದಾಳಿ, ಕಾರಣವೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





