SHIVAMOGGA LIVE NEWS | 2 FEBRUARY 2023
SHIMOGA | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ಪ್ರಕಟಿಸಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಪೋಸ್ಟ್ ಸಿದ್ಧಪಡಿಸಿ (Fake Post) ಜಾಲತಾಣದಲ್ಲಿ ಹರಿಬಿಟ್ಟವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ.
ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇದರಲ್ಲಿ ವಿವಿಧ ಹುದ್ದೆಗಳನ್ನು ಕೂಡ ಸೂಚಿಸಲಾಗಿತ್ತು. ಅಲ್ಲದೆ ಈ ಮೇಲ್ ಐಡಿಯನ್ನು ಕೂಡ ಪ್ರಕಟಿಸಲಾಗಿದೆ.
ಪೋಸ್ಟ್ ನಂಬಿ ರೆಸ್ಯೂಮ್ ಕಳಿಸಿದರು
ಈ ಪೋಸ್ಟರ್ (Fake Post) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆ ನೇಮಕಾತಿ ನಡೆಯುತ್ತಿದೆ ಎಂದು ನಂಬಿಕೊಂಡು, ಹಲವರು ಪೋಸ್ಟರ್ನಲ್ಲಿ ಸೂಚಿಸಿದ ಈ ಮೇಲ್ ಐಡಿಗೆ ತಮ್ಮ ಸ್ವವಿವರ ಕಳುಹಿಸಿದ್ದಾರೆ.
ಅಲರ್ಟ್ ಆದ ಪೊಲೀಸ್
ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಕುರಿತು ನಕಲಿ ಪೋಸ್ಟರ್ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಈ ಕುರಿತು ವಾಟ್ಸಪ್ ಮೂಲಕ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಪೋಸ್ಟ್ ನಕಲಿ. ಸಾರ್ವಜನಿಕರು ಇದನ್ನು ನಂಬಿ ವಂಚನೆಗೊಳಗಾಗಬಾರದು. ಈ ಪೋಸ್ಟ್ನ ಮೂಲ ಪತ್ತೆ ಹಚ್ಚಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಮತ್ತೆ ಶುರುವಾಯ್ತು ಪ್ರತಿಭಟನೆಗಳು, ಆಗ್ರಹ
ಈ ಮೊದಲೆ ಎಚ್ಚರಿಸಿದ್ದೆವು
ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ ಒಡ್ಡುತ್ತಿರುವುದು, ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವೆಬ್ ಸೈಟ್ ಈ ಮೊದಲೆ ಎಚ್ಚರಿಸಿತ್ತು. ಸಂಸದ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಪ್ರಟಿಸಿತ್ತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200