ಯುಟ್ಯೂಬ್‌ನಲ್ಲಿ ವಿಡಿಯೋ ನೋಡುತ್ತ ಲಕ್ಷಾಂತರ ರುಪಾಯಿ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ ರೈತ, ಹೇಗದು?

ಶಿವಮೊಗ್ಗ: ಯೂಟ್ಯೂಬ್‌ನಲ್ಲಿ ಸಾಲ ನೀಡುವುದಾಗಿ ಬಂದ ಜಾಹೀರಾತು ನಂಬಿ ರೈತರೊಬ್ಬರು ಲಕ್ಷಾಂತರ ರುಪಾಯಿ ಹಣ ಕಳೆದುಕೊಂಡಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಜಿಲ್ಲೆಯ ರೈತ ಯೂಟ್ಯೂಬ್‌ನಲ್ಲಿ ವಿಡಿಯೋಗಳನ್ನು ವೀಕ್ಷಿಸುತ್ತಿದ್ದಾಗ ಲೋನ್ ನೀಡುವ ವಿಡಿಯೋ ನೋಡಿ ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದರು. ವಾಟ್ಸಾಪ್ ಮೂಲಕ ಸಂಪರ್ಕಿಸಿದ ವಂಚಕರು ಸಾಲ ನೀಡುವುದಾಗಿ ನಂಬಿಸಿದ್ದಾರೆ. ಬಳಿಕ ಪ್ರೊಸೆಸಿಂಗ್ ಫೀ, ಟ್ಯಾಕ್ಸ್ ಮತ್ತು ಸರ್ವೀಸ್ ಚಾರ್ಜ್ ಸೇರಿದಂತೆ ವಿವಿಧ ಕಾರಣ ನೀಡಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾರೆ.

Shimogga-Cyber-Crime-CEN-Police-Station

ಜೂನ್ 2ರಿಂದ ಅಗಸ್ಟ್ 6ರವರೆಗೆ ಹಂತ ಹಂತವಾಗಿ ರೈತ ₹12,50,078 ಹಣವನ್ನು ವರ್ಗಾಯಸಿದ್ದಾರೆ. ಮೋಸ ಹೋಗಿರುವುದು ತಿಳಿದುಬಂದ ಬಳಿಕ ಶಿವಮೊಗ್ಗದ ಸಿಇಎನ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.