ಜಮೀನಿನಲ್ಲಿ ವಿಷ ಸೇವಿಸಿದ್ದ ರೈತ ಹನ್ನೆರಡು ದಿನದ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟೆಂಬರ್ 2021

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಹನ್ನೆರಡು ದಿನದ ಬಳಿಕ ಕೊನೆಯುಸಿರೆಳೆದಿದ್ದಾರೆ. ಸಾಲ ಬಾಧೆಗೆ ಮನನೊಂದು ಅವರು ವಿಷ ಕುಡಿದಿದ್ದರು.

ಮಂಜಪ್ಪ (72) ಆತ್ಮಹತ್ಯೆ ಮಾಡಿಕೊಂಡಿದ್ದ ರೈತ. ಆಗಸ್ಟ್ 26ರಂದು ಮಂಜಪ್ಪ ಅವರು ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದರು. ವಿಚಾರ ತಿಳಿದು ಕುಟುಂಬದವರು ಮತ್ತು ಸ್ಥಳೀಯರು ಮಂಜಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊನೆಯುಸಿರೆಳೆದಿದ್ದಾರೆ. ಮಂಜಪ್ಪ ಅವರು ಸಾಗರ ತಾಲೂಕು ಮಡಸೂರು ಗ್ರಾಮದವರಾಗಿದ್ದಾರೆ. ಮೆಕ್ಕೆಜೋಳ ಮತ್ತು ಶುಂಠಿ ಬೆಳೆದಿದ್ದರು. ಆದರೆ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ಆತ್ಮಹತ್ಯೆ ನಿರ್ಧಾರ ಮಾಡಿದ್ದರು.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NH nephrolody%2Bad %2Bkannada 10

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment