ಸಾಗರದ ತಾಳಗುಪ್ಪ ಬಳಿ ಹಗ್ಗ ತುಂಡಾಗಿ ಕೃಷಿಕನ ತಲೆ ಮೇಲೆ ಬಿದ್ದ ಕೊಂಬೆ, ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 JULY 2024

SAGARA : ಮರದ ಕೊಂಬೆ ಮೈಮೇಲೆ ಬಿದ್ದು ರೈತರೊಬ್ಬರು (FARMER) ಮೃತಪಟ್ಟಿದ್ದಾರೆ. ಕೊಂಬೆ ಕತ್ತರಿಸುತ್ತಿರುವಾಗ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರೈತ ಅಶೋಕ್‌ (58) ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ.

ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

Farmer-Ashok-succumbed-at-talavata-near-talaguppa.

ಮನೆ ಹಿಂಭಾಗ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಕೆಲಸಗಾರರು ಕತ್ತರಿಸುತ್ತಿದ್ದಾಗ ನಿಯಂತ್ರಣಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಅಶೋಕ ಅವರ ತಲೆಯ ಮೇಲೆ ಕೊಂಬೆ ಬಿದ್ದಿದೆ. ಅಶೋಕ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಂಗಳವಾರ ಸ್ವಗ್ರಾಮ ಹಿರೇಮನೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment