ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 OCTOBER 2023
SAGARA : ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ಹೊಟೇಲ್ ಒಂದರ ಕಾರಿಡಾರ್‌ನಲ್ಲಿ (Corridor) ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಟೇಲ್ ಸಿಬ್ಬಂದಿ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ
ಸಾಗರ ನಗರದ ಬಿ.ಹೆಚ್.ರಸ್ತೆಯ ಹೊಟೇಲ್ ಮುಂಭಾಗ ಭಾನುವಾರ ಘಟನೆ ನಡೆದಿದೆ. ಫಾಸ್ಟ್‌ಫುಡ್ ತಯಾರಿಕೆ ವ್ಯಾಪಾರ ನಡೆಸುತ್ತಿದ್ದ ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿರುವ ಬಸವರಾಜ್ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ- ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?
ಬಸವರಾಜ್ ಅವರು ಸಾಗರ ತಾಲೂಕಿನ ಜಂಬಾನೆ ಗ್ರಾಮದವರು. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸಾಗರ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422