ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
FATAFAT NEWS, 22 AUGUST 2024 | ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳ ಫಟಾಫಟ್ ನ್ಯೂಸ್ ಅಪ್ಡೇಟ್
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದೋಷಾರೋಪ ಪಟ್ಟಿ ಸಲ್ಲಿಕೆ ಶಿವಮೊಗ್ಗ ಲೈವ್.ಕಾಂ : ವಾಲ್ಮೀಕಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶಿವಮೊಗ್ಗ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ನಿಗಮದ ವ್ಯವಸ್ಥಾಪಕ ಜೆ.ಜಿ.ಪದ್ಮನಾಭ, ಲೆಕ್ಕಾಧೀಕ್ಷಕ ಪರಶುರಾಮ ದುರ್ಗಣ್ಣನವರ್ ಹೆಸರನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ 2024ರ ಮೇ ತಿಂಗಳಲ್ಲಿ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್ ಆಗ್ರಹ
MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಪ್ರತಿಕ್ರಿಯೆ ಶಿವಮೊಗ್ಗ ಲೈವ್.ಕಾಂ : ಶಾಸಕ ಬಿ.ಕೆ. ಸಂಗಮೇಶ್ವರ್ ಪುತ್ರ ಬಸವೇಶ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣ ಸಂಬಂಧ ಎಲ್ಲಾ ಆಯಾಮದಲ್ಲು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದರು. ಬಸವೇಶ್ ಹತ್ಯೆ ಮಾಡುವಂತೆ ಜೈಲಿನಿಂದ ಕರೆ ಬಂದಿದೆ ಎಂದು ಆರೋಪಿಸಲಾಗಿದೆ. ಯಾರಿಂದ ಕರೆ ಬಂದಿದೆ. ಯಾರು ಮಾತನಾಡಿದ್ದಾರೆ ಎಂಬುದು ಸೇರಿದಂತೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್, ಆಮೇಲೆ ಕಾದಿತ್ತು ಶಾಕ್
ವಿದ್ಯುತ್ ಶಾಕ್ಗೆ ಯುವಕ ಬಲಿ ಶಿವಮೊಗ್ಗ ಲೈವ್.ಕಾಂ : ಹೊಳೆಹೊನ್ನೂರು ಸಮೀಪದ ಜಂಬರಗಟ್ಟ ಗ್ರಾಮದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಪಟ್ಟಣದ ಉಪ್ಪಾರ ಬೀದಿ ವಾಸಿ ಶಿಲ್ಪಿ ಎಚ್.ಎನ್.ಶರತ್ (26) ಸಾವನ್ನಪ್ಪಿದ್ದಾರೆ. ಜಂಬರಗಟ್ಟ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ದ್ವಾರ ಬಾಗಿಲು ಕಾಮಗಾರಿ ನಡೆಯುತ್ತಿದೆ. ಅಲ್ಲಿ ವಿಗ್ರಹ ಕೆಲಸ ಮಾಡುವ ಸಂದರ್ಭ ವಿದ್ಯುತ್ ತಂತಿ ತಗುಲಿದೆ. ತೀವ್ರ ಅಸ್ವಸ್ಥನಾಗಿದ್ದ ಹೆಚ್.ಎನ್.ಶರತ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್