ಹರಿಗೆ ಬಳಿ ಭೀಕರ ಅಪಘಾತ, ಮೂರು ಭಾಗವಾದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಹರಿಗೆಯ ಸಕ್ಕರೆ ಕಾರ್ಖಾನೆ ಬಳಿ ಬೆಂಗಳೂರು – ಹೊನ್ನಾವರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಸೀಗೆಹಟ್ಟಿ ನಿವಾಸಿಯಾದ ಗುರುರಾಜ್ (22) ಮೃತ ದುರ್ದೈವಿ. ಆಟೋ ಚಾಲಕ ಗುರುರಾಜ್ ಅವರು ಇಂದು ಬೆಳಗಿನ ಜಾವ ಶಿವಮೊಗ್ಗದಿಂದ ಭದ್ರಾವತಿಯತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಮೂರು ಭಾಗವಾಗಿ ಜಖಂಗೊಂಡಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಘಟನೆಯಲ್ಲಿ ಗುರುರಾಜ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car-Incident-near-Harige-in-Shimoga