ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 OCTOBER 2023
SHIMOGA : ಕಿಟಕಿಯ ಕಬ್ಬಿಣದ ರಾಡ್‌ಗಳನ್ನು ಮುರಿದು ಫೈನಾನ್ಸ್ ಸಂಸ್ಥೆಯೊಂದರಲ್ಲಿ (Finance Institution) ನಗದು ಮತ್ತು ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿರುವ ಫೈವ್ ಸ್ಟಾರ್ ಬಿಸ್ನೆಸ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಘಟನೆ ಸಂಭವಿಸಿದೆ. ಅ.12ರಂದು ರಾತ್ರಿ ಉದ್ಯೋಗಿಗಳು ಸಂಸ್ಥೆಯ ಬಾಗಿಲು ಬಂದ್ ಮಾಡಿ ತೆರಳಿದ್ದರು. ಅ.13ರಂದು ಬೆಳಗ್ಗೆ 9.30ಕ್ಕೆ ಸೀನಿಯರ್ ಬ್ರಾಂಚ್ ಮ್ಯಾನೇಜರ್ ಚನ್ನಕೇಶವ ಮತ್ತು ಸಂಸ್ಥೆಯ ಉದ್ಯೋಗಿ ಗುರುರಾಜ್ ಸಂಸ್ಥೆಯ ಬೀಗ ತೆಗೆದು ಒಳ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ವಿದ್ಯಾನಗರ ಮೇಲ್ಸೇತುವೆ ಕಾಮಗಾರಿ ಕೊನೆ ಹಂತಕ್ಕೆ, ಶಿವಮೊಗ್ಗ – ಚಿತ್ರದುರ್ಗ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲು
ಬೀರುವಿನ ಲಾಕರ್‌ನಲ್ಲಿ ಇಟ್ಟಿದ್ದ 1.05 ಲಕ್ಷ ರೂ. ನಗದು, ಸಿಸಿಟಿವಿಯ ಡಿವಿಆರ್ ಅನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಕಿಟಕಿಯ ಕಬ್ಬಿಣದ ರಾಡ್‌ಗಳನ್ನು ಮುರಿದು ಕಳ್ಳರು ಒಳ ಪ್ರವೇಶಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






