ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಹೆಸರು ಬರೆದು, ನಿದ್ರೆ ಮಾತ್ರೆಗಳನ್ನು ನುಂಗಿದ ಮಹಿಳೆ

ಶಿವಮೊಗ್ಗ: ನಗರದ ಖಾಸಗಿ ಆಸ್ಪತ್ರೆಯೊಂದರ ಆಡಳಿತ ಮಂಡಳಿ ಹಾಗೂ ಮಾಜಿ ಉದ್ಯೋಗಿ ನಡುವಿನ ಹಣಕಾಸು ವಿವಾದದ ಹಿನ್ನೆಲೆ, ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (ಈ ಸುದ್ದಿಯನ್ನು ಇನ್ನು 43 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ವಿಜಯನಗರ ಬಡಾವಣೆಯ ನಿವಾಸಿ ಶುಭಾ (38) ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ. ಅವರನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Crime-News-General-Image

ಹಣ ದುರ್ಬಳಕೆ ಆರೋಪ

ಆಸ್ಪತ್ರೆಯಲ್ಲಿ ಲೆಕ್ಕಾಧಿಕಾರಿಯಾಗಿದ್ದ ನಾಗರಾಜ್ ಎಂಬುವರು, ಸಂಸ್ಥೆಯ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆಡಳಿತ ಮಂಡಳಿಯವರು ಆರೋಪಿಸಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಲೆಕ್ಕಪತ್ರ ಪರಿಶೀಲನೆ ವೇಳೆ ವ್ಯತ್ಯಯ ಕಂಡುಬಂದಿತ್ತು ಎಂದು ಆಡಳಿತ ಮಂಡಳಿ ತಿಳಿಸಿತ್ತು.

ಇನ್ನೊಂದೆಡೆ, ಆಸ್ಪತ್ರೆಯವರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದಂಪತಿ ಪ್ರತ್ಯಾರೋಪ ಮಾಡಿದ್ದಾರೆ. ಇದೇ ಮನಸ್ತಾಪದಿಂದ ನಾಗರಾಜ್‌ ಅವರ ಪತ್ನಿ ಶುಭಾ ಅವರು ಡೆತ್‌ನೋಟ್ ಬರೆದಿಟ್ಟು ಮಾತ್ರೆ ಸೇವಿಸಿದ್ದರು ಎನ್ನಲಾಗಿದೆ. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಪಾಯದಿಂದ ಪರಾಗಿದ್ದಾರೆ. ಸದ್ಯ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: