ಶಿವಮೊಗ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಬೈಕ್‌ ಸವಾರ, ಪೋಷಕರಿಗೆ ಬಿಸಿ ಮುಟ್ಟಿಸಿತು ನ್ಯಾಯಾಲಯ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಅಪ್ರಾಪ್ತನ ಕೈಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿ ಆದೇಶಿಸಿದೆ.

ಫೆ.24ರಂದು ಮೀನಾಕ್ಷಿ ಭವನ ಹೊಟೇಲ್‌ ಸಮೀಪ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ತಪಾಸಣೆ ನಡೆಸುತ್ತಿದ್ದರು. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕನನ್ನು ತಡೆದು ಪರಿಶೀಲಿಸಿದಾಗ ಆತ ಅಪ್ರಾಪ್ತ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Traffic-police-in-Shimoga-city.

ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮೊಪೆಡ್‌ ಮಾಲೀಕ ಬಾಪೂಜಿನಗರ ನಿವಾಸಿಗೆ ದಂಡ ವಿಧಿಸಿ ಆದೇಶಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು

Leave a Comment