ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 28 NOVEMBER 2024
ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ (Post) ಪ್ರಕಟಿಸಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಮೋಹಿತ್ ನರಸಿಂಹಮೂರ್ತಿ ಎಂಬಾತನ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಾಚ್ಯವಾಗಿ ನಿಂದಿಸಿ ಎಕ್ಸ್ ಮತ್ತು ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪ್ರಕಟಿಸಲಾಗಿತ್ತು. ಇದರಿಂದ ಸಚಿವರ ವಿರುದ್ಧ ಅವಾಚ್ಯವಾಗಿ ನಿಂದಿಸಿರುವುದು, ಸರ್ಕಾರದ ಘನತೆಗೆ ಧಕ್ಕೆ ತಂದಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422