ಶಿವಮೊಗ್ಗದಲ್ಲಿ ಡಿಜೆ ಅಬ್ಬರ, ದಾಖಲಾಯ್ತು ಪ್ರಕರಣ, ಎಲ್ಲೆಲ್ಲಿ?

ಶಿವಮೊಗ್ಗ: ನಗರದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಆಚರಣೆ ಮೆರವಣಿಗೆ ವೇಳೆ ಅನುಮತಿ ಪಡೆಯದೆ, ಡಿಜೆ ಸೌಂಡ್ ಸಿಸ್ಟಮ್‌ಗಳನ್ನು ಅಳವಡಿಸಿದ್ದಕ್ಕಾಗಿ ಕೋಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಕರಣ 1

ಸಹ್ಯಾದ್ರಿ ಕಾಲೇಜು ಹಿಂಭಾಗದ ದರ್ಗಾ ಹಾಗೂ ಮತ್ತೂರು ಕ್ರಾಸ್ ರಸ್ತೆ ಬಳಿ ಮೆರವಣಿಗೆ ನಡೆಸಲಾಗಿತ್ತು. ಆಯೋಜಕರು ಅನುಮತಿ ಪಡೆಯದೆ ವಾಹನಗಳಲ್ಲಿ ಜನರೇಟರ್ ಮತ್ತು ಡಿಜೆ ಸೌಂಡ್ ಬಾಕ್ಸ್‌ಗಳನ್ನು ಬಳಸಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.

Kote-Police-Station-Shivamogga

ಪ್ರಕರಣ 2

ಲಷ್ಕರ್ ಮೊಹಲ್ಲಾ ಮಸೀದಿ ಹತ್ತಿರ ಟ್ರ್ಯಾಕ್ಟರ್‌ನಲ್ಲಿ ಡಿಜೆ ಸೌಂಡ್ ಬಾಕ್ಸ್ ಅಳವಡಿಸಿ ನಿಗದಿತ ಶಬ್ದಕ್ಕಿಂತ ಹೆಚ್ಚಿನ ಶಬ್ದದಲ್ಲಿ ಸೌಂಡ್ಸ್ ಬಳಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಸಂಬಂಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ