ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿದೆ. ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಏನಿದು ಕೇಸ್?
ಸುಳ್ಳು ಮಾಹಿತಿ ನೀಡಿ ವೈ.ಸಿ.ಶೇಷಪ್ಪ ಎಂಬುವವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಜಿಲ್ಲಾಧಿಕಾರಿ ಅವರು ವೈ.ಸಿ.ಶೇಷಪ್ಪ ಅವರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು ಎಂದು ಆದೇಶಿಸಿದ್ದರು.
ಶೇಷಪ್ಪಗೆ 1980ರಲ್ಲಿ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿತ್ತು. ಆಗ ಶೇಷಪ್ಪಗೆ ನೆರವಾಗಿದ್ದ ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕ, ಅಂದಿನ ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















