SHIMOGA NEWS, 15 NOVEMBER 2024 : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ.
ಜಯನಗರ ಠಾಣೆ ಇನ್ಸ್‌ಪೆಕ್ಟರ್ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ. ಈಚೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ಸಂದರ್ಭ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
![]() |
ಎಫ್‌ಐಆರ್‌ನಲ್ಲಿ ಏನಿದೆ?
ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ? ಇದು ಹೀಗೆ ಮುಂದುವರೆದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಅನ್ಯ ಕೋಮು ಮತ್ತು ಅನ್ಯ ಪಕ್ಷದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200