ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸೂಚನೆ ಮೇರೆಗೆ ಶಿವಮೊಗ್ಗ ತಾಲೂಕಿನ ಹಿಂದಿನ ಇಬ್ಬರು ತಹಶೀಲ್ದಾರ್’ಗಳು, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಾಧಿಕಾರಿ ಮತ್ತು ಓರ್ವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಉದ್ಯೋಗಕ್ಕಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ?
ಕೃಷ್ಣ ಎಂಬುವವರು KSRTC ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತಾವು ಪರಿಶಿಷ್ಟ ಪಂಗಡಕ್ಕೆ ಸೇರಿರುವುದಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಇದರ ಸಿಂಧುತ್ವ ಪರಿಶೀಲನೆ ನಡೆಸಿದಾಗ ಜಾತಿ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಇರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಚಾಲಕ ಕೃಷ್ಣ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಇನ್ನು, ಕೂಲಂಕಷವಾಗಿ ಪರಿಶೀಲನೆ ನಡೆಸದೆ ಜಾತಿ ಪ್ರಮಾಣ ಪತ್ರ ವಿತರಿಸಿದ ಆರೋಪದ ತಹಶೀಲ್ದಾರ್’ಗಳಾದ ಮಂಜುನಾಥ್ ಮತ್ತು ಕೊಟ್ರೇಶ್, ರೆವಿನ್ಯೂ ಇನ್ಸ್’ಪೆಕ್ಟರ್ ವಿಜಯಕುಮಾರ್, ಗ್ರಾಮ ಲೆಕ್ಕಿಗ ಸುರೇಶ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 2013ರಲ್ಲಿ ಜಾತಿ ಪ್ರಮಾಣ ಪತ್ರ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಲಾಯದ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200