ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022
ಕೇಸರಿ ಧ್ವಜ ಹಾರಿಸಿದ್ದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ಸಂಘಟನೆ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದರು. ಧ್ವಜಾರೋಹಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
ಕ್ರಮ ಕೈಗೊಳ್ಳಲು ಕಾರಣವೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಕೆಲವರು ‘ಬಾಪೂಜಿನಗರ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ. 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಇದನ್ನು ಮೀರಿ ಕೆಲವರು ಧ್ವಜಾರೋಹಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆ ಇದ್ದರೂ ನಿಗದಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಗೂಂಪುಗೂಡಲಾಗಿದೆ. ಇನ್ನು, ಕಾಲೇಜು ಆಡಳಿತ ಮಂಡಳಿಯ ಅನುಮತಿ ಇಲ್ಲದೆ ಏಕಾಏಕಿ ಧ್ವಜಾಹೋರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
» ಇದನ್ನೂ ಓದಿ | ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಾಟ
About Shivamogga Live | Shimoga District Profile | Whatsapp Number 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422