SHIVAMOGGA LIVE | 18 JUNE 2023
THIRTHAHALLI : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್ ಮಾಡಿ ವೈರಲ್ (video viral) ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್ (video viral) ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಬಳಕೆದಾರರಿಗೆ ವಾರ್ನಿಂಗ್
ವಿಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆ ಎಚ್ಚರಿಕೆ ಸಂದೇಶ ಪ್ರಕಟಿಸಿದೆ. ಅಶ್ಲೀಲ ಫೋಟೊ, ವಿಡಿಯೋಗಳನ್ನು ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿರುವುದು ಗೊತ್ತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ರೀತಿ ಷೇರ್ ಮಾಡುವುದು ಮತ್ತು ಸ್ಟೋರ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಲಾಗಿದೆ. ಈ ಕುರಿತು ಗ್ರೂಪ್ ಅಡ್ಮಿನ್ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ – ಮಳೆಗಾಗಿ ವಿಶೇಷ ಪೂಜೆ ಮೊರೆ ಹೋದ ಜನ | ಕಚೇರಿಯಲ್ಲೇ ಅಧಿಕಾರಿಗಳಿಗೆ ಯೋಗ | ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕಿನ 10 ಫಟಾಫಟ್ ನ್ಯೂಸ್
ಇನ್ನು, ಎಬಿವಿಪಿ ನಾಯಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ಸಂಘಟನೆ ಕಾರ್ಯಕರ್ತರು ತೀರ್ಥಹಳ್ಳಿ ಡಿವೈಎಸ್ಪಿಗೆ ದೂರು ನೀಡಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200