ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 18 ಜನವರಿ 2022
ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತೀರ್ಥಹಳ್ಳಿ ತಾಲೂಕಿನ ತ್ರಿಯಂಬಕಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಕ್ಲಾಪುರ ಗ್ರಾಮದ ಹಿತ್ತಲಸರದಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗ್ರಾಮದ ರಾಮಸ್ವಾಮಿ ಅವರ ಮನೆಯ ದನದ ಕೊಟ್ಟಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ಆರಿಸಿದ್ದಾರೆ.