ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಶಿವಮೊಗ್ಗದ ದೇವಕಾತಿಕೊಪ್ಪದಲ್ಲಿ ಬುಧವಾರ ರಾತ್ರಿ ಘಟನೆ ಸಂಭವಿಸಿದೆ. ಚಂದ್ರ ಎಂಬುವವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತೆಂಗಿನ ಗರಿಗಳನ್ನು ಇರಿಸಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರೆ ಬೆಂಕಿ ನಂದಿಸಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]