ಗುಂಡೇಟಿಗೆ ಬಲಿಯಾದ ಬಿಜೆಪಿ ಮುಖಂಡನ ಅಂತ್ಯ ಸಂಸ್ಕಾರ, ಮನೆಗೆ ಗೃಹ ಸಚಿವರ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 ಮಾರ್ಚ್ 2022

ಗುಂಡೇಟಿಗೆ ಬಲಿಯಾದ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಅಂತ್ಯಕ್ರಿಯೆ ಭಾನುವಾರ ನೆರವೇರಿತು. ಮೃತನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂತರಾಜು ಅವರ ಮನೆಗೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕಾಂತರಾಜು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಘಟನೆಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಕುಟುಂಬದವರಿಗೆ ತಿಳಿಸಿದರು.

ಇದನ್ನೂ ಓದಿ |  ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನಿಗೆ ಗುಂಡೇಟು, ಎಫ್ಐಆರ್ ದಾಖಲು, ಶಿವಮೊಗ್ಗಕ್ಕೆ ಮೃತದೇಹ ರವಾನೆ

ಶನಿವಾರ ಕಾಂತರಾಜು ಅವರಿಗೆ ಗುಂಡು ತಗುಲಿ ಮೃತಪಟ್ಟಿದ್ದರು. ಅಂತ್ಯ ಸಂಸ್ಕಾರದ ವೇಳೆ ಸಹಕಾರಿ ಮುಖಂಡ ಸಿ.ಬಿ.ಈಶ್ವರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಂದವಳ್ಳಿ ಸೋಮಶೇಖರ್, ಪ್ರಶಾಂಕ್ ಕುಕ್ಕೆ ಸೇರಿದಂತೆ ಕುಟುಂಬದವರು, ಆಪ್ತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಇದನ್ನೂ ಓದಿ | ತೀರ್ಥಹಳ್ಳಿಯಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ ಸಾವು, ಆಸ್ಪತ್ರೆಗೆ ಗೃಹ ಸಚಿವರ ದೌಡು

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2022

Leave a Comment