ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ಮೀನು ಹೊಟೇಲ್ (FISH HOTEL) ಒಂದರಲ್ಲಿ ಬಿಲ್ ಕೊಡುವ ವಿಚಾರವಾಗಿ ಜಗಳವಾಗಿದ್ದು, ಗ್ರಾಹಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಗಾಜನೂರಿನ (GAJANUR) ಮೀನು ಹೊಟೇಲ್ ಒಂದರಲ್ಲಿ ಘಟನೆ ಸಂಭವಿಸಿದೆ. ಗಾಜನೂರು ಗ್ರಾಮದ ಶಿವಕುಮಾರ್ ಎಂಬಾತನ ಮೇಲೆ ಹಲ್ಲೆಯಾಗಿದೆ.
ಏನಿದು ಪ್ರಕರಣ? (FISH HOTEL)
ಶಿವಕುಮಾರ್ ತನ್ನ ಸ್ನೇಹಿತರಾದ ಗಾಜನೂರು ಗ್ರಾಮದ ಮೋಹನ್, ಕೃಷ್ಣಪ್ಪ, ರವಿ ಎಂಬುವವರೊಂದಿಗೆ ಮೀನು ಹೊಟೇಲ್ ಗೆ ಬಂದು ಊಟ ಮಾಡಿದ್ದಾರೆ. ಬಿಲ್ ಕೊಡುವ ಸಂದರ್ಭ ದುಬಾರಿಯಾಯ್ತು ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ. ಕ್ಯಾಷಿಯರ್ ಮತ್ತು ಶಿವಕುಮಾರ್ ನಡುವೆ ಮಾತಿನ ಚಕಮಕಿಯಾಗಿದೆ. ಹೊಟೇಲ್ ಮಾಲೀಕನೊಂದಿಗೆ ಮಾತನಾಡುತ್ತೇನೆ ಎಂದು ಶಿವಕುಮಾರ್ ತಿಳಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರೋರಾತ್ರಿ ಹೊರಗಿಂದ ಉದ್ಯಮಿ ಮನೆ ಬಾಗಿಲಿನ ಚಿಲಕ ಲಾಕ್, ಬೆಳಗ್ಗೆ ಹೊರಬಿತ್ತು ಅಸಲಿ ವಿಚಾರ
ಶಿವಕುಮಾರನ ಸ್ನೇಹಿತರೆಲ್ಲ ಹೊರಟ ಮೇಲೆ ಹೊಟೇಲ್ (FISH HOTEL) ಮಾಲೀಕ ಸ್ಥಳಕ್ಕೆ ಆಗಮಿಸಿದ್ದಾನೆ. ಈ ವೇಳೆ ಮಾತಿನ ಚಕಮಕಿಯಾಗಿದ್ದು, ಶಿವಕುಮಾರ್ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹೊಟೇಲ್ ಮಾಲೀಕ, ಕ್ಯಾಷಿಯರ್ ಮತ್ತು ಹೊಟೇಲ್ ಹುಡುಗರ ವಿರುದ್ಧ ಶಿವಕುಮಾರ್ ದೂರು ನೀಡಿದ್ದಾರೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ರಸ್ತೆ ಪಕ್ಕ ನಿಂತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ, ಯುವತಿ ಕಾಲಿಗೆ ಗಂಭೀರ ಗಾಯ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು







