ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಶತಾಯುಷಿಯ ಸ್ವಾಭಿಮಾನದ ಬದುಕು
ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಅವರು ಮೀನಜ್ಜ ಎಂದು ಸುತ್ತಮುತ್ತಲು ಚಿರಪರಿಚಿತರಾಗಿದ್ದರು. ಹುಲಿಕಲ್‌ನಲ್ಲಿ ತಾವೇ ನಿರ್ಮಿಸಿದ್ದ ಶೆಡ್‌ನಲ್ಲಿ ವಾಸವಾಗಿದ್ದರು. 102 ವರ್ಷವಾಗಿದ್ದರು ಗಟ್ಟಿಮುಟ್ಟಾಗಿದ್ದರು. ಯಾರನ್ನು ಅವಲಂಬಿಸದೆ ಸ್ವಾಭಿಮಾನದಿಂದ ಬದುಕು ನಡೆಸುತ್ತಿದ್ದರು.
ಘಟನೆ ಸಂಬಂದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು















