ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ₹61,500 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ವಸೀಂ ಅಕ್ರಮ್ (24), ನದೀಮ್ ಅಲಿಯಾಸ್ ನದ್ದು (21), ನಾಸೀರ್ ಶೇಖ್ (20), ಹರ್ಷದ್ ವುಲ್ಲಾ ಅಲಿಯಾಸ್ ಅದ್ದು (21) ಹಾಗೂ ಶಾಹೀದ್ ಖಾನ್ ಅಲಿಯಾಸ್ ಭಾಷಾ ಖಾನ್ (26) ಬಂಧಿತರು.

ಶಿವಮೊಗ್ಗ–ಹಾಳೂರು ಅನುಪಿನಕಟ್ಟೆ ಮುಖ್ಯ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯ ಪಿಎಸ್‌ಐ ರಘುವೀರ್ ಎಂ. ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಗಳಿಂದ ₹61,500 ಮೌಲ್ಯದ 1 ಕೆಜಿ 230 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಮಾರಾಟದಿಂದ ಬಂದಿದ್ದ ₹400 ಹಣವನ್ನು ವಶಕ್ಕೆ ಪಡೆದಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.