ಶಿವಮೊಗ್ಗ ಲೈವ್.ಕಾಂ | SHIMOGA | 15 ಡಿಸೆಂಬರ್ 2019
ಮಾನಸಿಕ ಅಸ್ವಸ್ಥನೊಬ್ಬ ಐದು ವರ್ಷದ ಅಕ್ಕನ ಮಗಳಿಗೆ ಚಾಕು ಇರಿದು ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಇವತ್ತು ಬೆಳಗ್ಗೆ ಘಟನೆ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಜನಿ (5) ಮೃತ ಬಾಲಕಿ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ರಜನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲೇ ರಜನಿ ಕೊನೆಯುಸಿರೆಳೆದಿದ್ದಾಳೆ.
ಚಾಕು ಹಾಕಿದ್ದು ಸೋದರ ಮಾವ
ಮಗುವಿನ ಸೋದರ ಮಾವನೇ ಆಕೆಯ ಪಾಲಿಗೆ ಕಂಟಕವಾಗಿಬಿಟ್ಟ. ಸೋದರ ಮಾವ ಸಂತೋಷ್ ಬೆಳಗ್ಗೆ ಚಾಕು ಇರಿದಿದ್ದಾನೆ. ರಕ್ತದ ಮಡುವಿನಲ್ಲಿದ್ದ ಮಗುವನ್ನು ಕೂಡಲೆ ಆಸ್ಪತ್ರೆಯತ್ತ ಕರೆದೊಯ್ಯಲಾಯಿತು.
ಮಾವ ಮಾನಸಿಕ ಅಸ್ವಸ್ಥ
ಸೋದರ ಮಾವ ಸಂತೋಷ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಈ ಕುರಿತು ಆತನ ಕುಟುಂಬದವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಸ್ಥಳೀಯರು ಘಟನೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Five Year Old was killed by father in law today in Shimoga Gadikoppa. It is said that the father in law was a Mentally Retard person. Tunga Nagara Police lodged a complaint.