SHIVAMOGGA LIVE NEWS | 15 JUNE 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ವಿದ್ಯಾನಗರ ಮುಖ್ಯರಸ್ತೆಯಿಂದ ಮತ್ತೂರು ಮಾರ್ಗದಲ್ಲಿ ದರೋಡೆಗೆ ಹೊಂಚುಹಾಕಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ (IMPRISONMENT) ಮತ್ತು 8 ಸಾವಿರ ರೂ. ದಂಡ ವಿಧಿಸಿದೆ.
ಉತ್ತರ ಪ್ರದೇಶ ಮೀರತ್‌ನ ಸಲ್ಮಾನ್ ಅಲಿಯಾಸ್ ಲಲ್ಲಾ (24) ಅಪರಾಧಿ. 2020ರ ಸೆ.16ರಂದು ರಾತ್ರಿ ವಿದ್ಯಾನಗರ ಮುಖ್ಯ ರಸ್ತೆಯ ಕಡೆಯಿಂದ ಮತ್ತೂರು ಕಡೆಗೆ ಹೋಗುವ ರಸ್ತೆಯ ಬಳಿ ಆಯುಧಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಅಂದಿನ ಕೋಟೆ ಠಾಣೆ ಇನ್‌ಸ್ಪೆಕ್ಟರ್ ಟಿ.ಪಿ.ಚಂದ್ರಶೇಖರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದಿದ್ದರು.
ಈ ಪ್ರಕರಣದಲ್ಲಿ ಸಲ್ಮಾನ್ ಎರಡನೆ ಆರೋಪಿಯಾಗಿದ್ದ. ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಕೋಟೆ ಪಿಎಸ್‌ಐ ಶಿವಾನಂದ ಕೋಳಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆ ನ್ಯಾಯಾಧೀಶೆ ಬಿ.ಆರ್.ಪಲ್ಲವಿ ಅವರು ಸಲ್ಮಾನ್‌ಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ಒ.ಪುಷ್ಪಾ ಸರ್ಕಾರದ ಪರ ವಾದ ಮಂಡಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಾಪಮಾನ ಏರಿಕೆ, ಇವತ್ತು ಎಷ್ಟಿದೆ ಉಷ್ಣಾಂಶ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






