ವಿದ್ಯಾನಗರ ದರೋಡೆ ಕೇಸ್‌, ಲಲ್ಲಾಗೆ ಐದು ವರ್ಷ ಕಠಿಣ ಜೈಲು, 8 ಸಾವಿರ ಫೈನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JUNE 2024

SHIMOGA : ವಿದ್ಯಾನಗರ ಮುಖ್ಯರಸ್ತೆಯಿಂದ ಮತ್ತೂರು ಮಾರ್ಗದಲ್ಲಿ ದರೋಡೆಗೆ ಹೊಂಚುಹಾಕಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ (IMPRISONMENT) ಮತ್ತು 8 ಸಾವಿರ ರೂ. ದಂಡ ವಿಧಿಸಿದೆ.

ಉತ್ತರ ಪ್ರದೇಶ ಮೀರತ್‌ನ ಸಲ್ಮಾನ್ ಅಲಿಯಾಸ್ ಲಲ್ಲಾ (24) ಅಪರಾಧಿ. 2020ರ ಸೆ.16ರಂದು ರಾತ್ರಿ ವಿದ್ಯಾನಗರ ಮುಖ್ಯ ರಸ್ತೆಯ ಕಡೆಯಿಂದ ಮತ್ತೂರು ಕಡೆಗೆ ಹೋಗುವ ರಸ್ತೆಯ ಬಳಿ ಆಯುಧಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಅಂದಿನ ಕೋಟೆ ಠಾಣೆ ಇನ್‌ಸ್ಪೆಕ್ಟ‌ರ್ ಟಿ.ಪಿ.ಚಂದ್ರಶೇಖರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದಿದ್ದರು.

ಈ ಪ್ರಕರಣದಲ್ಲಿ ಸಲ್ಮಾನ್ ಎರಡನೆ ಆರೋಪಿಯಾಗಿದ್ದ. ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಕೋಟೆ ಪಿಎಸ್‌ಐ ಶಿವಾನಂದ ಕೋಳಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆ ನ್ಯಾಯಾಧೀಶೆ ಬಿ.ಆ‌ರ್.ಪಲ್ಲವಿ ಅವರು ಸಲ್ಮಾನ್‌ಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ಒ.ಪುಷ್ಪಾ ಸರ್ಕಾರದ ಪರ ವಾದ ಮಂಡಿಸಿದ್ದರು.‌

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಾಪಮಾನ ಏರಿಕೆ, ಇವತ್ತು ಎಷ್ಟಿದೆ ಉಷ್ಣಾಂಶ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment