SHIVAMOGGA LIVE NEWS | 9 AUGUST 2023
HOSANGARA : ಅಕ್ರಮವಾಗಿ ಹೊನ್ನೆಮರದ ತುಂಡುಗಳನ್ನು ಸಾಗಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ತಾಲೂಕು ಸಂಪೆಕಟ್ಟೆ ಹೆಬ್ಬುರುಳಿ ರಸ್ತೆಯಲ್ಲಿ ಕ್ಯಾಂಟರ್ ಲಾರಿಯಲ್ಲಿ ಹೊನ್ನೆಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆಗೆ ವಾಹನ ತಡೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುರೇಶ್ ಮತ್ತು ಗುರುಮೂರ್ತಿ ಎಂಬುವವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಶಾಹಿದ್ ಎಂಬಾತ ಪರಾರಿಯಾಗಿದ್ದಾನೆ.
ವಲಯ ಅರಣ್ಯಾಧಿಕಾರಿ ಸಂಜಯ್ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿತ್ತು. ಬಂಧಿತರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.