ಮಾಜಿ ಮಿನಿಸ್ಟರ್‌ ಪಿ.ಎ ಎಂದು ನಂಬಿಸಿ ಶಿವಮೊಗ್ಗದ ಉದ್ಯಮಿ, ಸ್ನೇಹಿತರಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು ಮೋಸ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹7.50 ಲಕ್ಷ ಪಡೆದು ವಂಚಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ತುಮಕೂರು ಮೂಲದ ವ್ಯಕ್ತಿಯೊಬ್ಬ ತಾನು ಮಾಜಿ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದನು. ತನಗೆ ಹಿರಿಯ ನಾಯಕರು ಹಾಗೂ ಅಧಿಕಾರಿಗಳ ಪರಿಚಯವಿದ್ದು, ಸಮಾಜ ಕಲ್ಯಾಣ ಇಲಾಖೆಯ ಇಂಟರೆಸ್ಟ್ ಸಬ್ಸಿಡಿ ಸ್ಕೀಮ್ ಅಡಿಯಲ್ಲಿ ₹1.45 ಕೋಟಿ ಸಾಲ ಮಂಜೂರು ಮಾಡಿಸಿಕೊಡುವುದಾಗಿ ನಂಬಿಸಿದ್ದ. ಸಾಲದ ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವ ಅಗತ್ಯವಿಲ್ಲ ಎಂದು ಉದ್ಯಮಿಗೆ ತಿಳಿಸಿದ್ದ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಾಲ ಮಂಜೂರಾತಿಗೆ ಅಧಿಕಾರಿಗಳಿಗೆ ನೀಡಬೇಕೆಂದು ಹೇಳಿ ಶಿವಮೊಗ್ಗದ ಉದ್ಯಮಿಯ ಅಂಗಡಿಯಲ್ಲಿ ಹಂತ ಹಂತವಾಗಿ ₹1,05,200 ನಗದಾಗಿ ಪಡೆದಿದ್ದನು. ನಂತರ 2025ರ ಆಗಸ್ಟ್‌ನಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ಆನ್‌ಲೈನ್ ಮೂಲಕ ₹6,44,800 ಸೇರಿ ಒಟ್ಟು ₹7.50 ಲಕ್ಷ ಹಣವನ್ನು ಪಡೆದುಕೊಂಡಿದ್ದನು ಎಂದು ಆರೋಪಿಸಲಾಗಿದೆ. 

Shivamogga-Rural-Police-Station

ಹಣ ಪಡೆದ ಬಳಿಕ ಸಾಲದ ಮೊತ್ತ ಖಾತೆಗೆ ಜಮಾ ಆಗುತ್ತದೆ ಎಂದು ಸುಳ್ಳು ಹೇಳುತ್ತಾ ಉದ್ಯಮಿಯ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಇದೇ ರೀತಿ ಉದ್ಯಮಿಯ ಪರಿಚಿತರು ಹಾಗೂ ಸ್ನೇಹಿತರಿಗೂ ಸಾಲ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.