ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 2 ಡಿಸೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಗಾಂಜಾ ದಂಧೆಕೋರರ ವಿರುದ್ಧ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎನ್.ಆರ್.ಪುರ ರಸ್ತೆಯಲ್ಲಿ ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. ಮಾರಾಟಕ್ಕೆ ತಂದಿದ್ದ ಗಾಂಜಾ ವಶಕ್ಕೆ ಪಡೆಯಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎನ್.ಆರ್.ಪುರ ರಸ್ತೆಯ ಪುಟ್ಟಪ್ಪ ಕ್ಯಾಂಪ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಲೇಔಟ್’ನಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ನಾಲ್ವರು ಯುವಕರು ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು.
ಬಳ್ಳಾರಿಯ ನರಸಿಂಹ (24), ಜಾಹೀರ್ (35), ಶಿವಮೊಗ್ಗ ಟಿಪ್ಪು ನಗರದ ಇಮ್ರಾನ್ (24), ಕಾಶಿಪ್ (19) ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 1 ಕೆ.ಜಿ 550 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಕೃತ್ಯಕ್ಕೆ ಬಳಕೆ ಮಾಡಲಾಗಿದ್ದ ಎರಡು ಬೈಕ್’ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.