ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 22 ಸೆಪ್ಟಂಬರ್ 2020
ಕಾರ್ಕಳದಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಜೀನತ್, ಜೀಶನ್, ಜಬೀರ್ ಮತ್ತು ಮುಬಾರಕ್ ಬಂಧಿತರು. ಕಾರ್ಕಳದಿಂದ ಸ್ವಿಫ್ಟ್ ಕಾರಿನಲ್ಲಿ ಎರಡು ಕೆ.ಜಿ.ಯಷ್ಟು ಗಾಂಜಾ ಸಾಗಿಸುತ್ತಿದ್ದರು. ತೀರ್ಥಹಳ್ಳಿ ತಾಲೂಕು ಬಾಳೆಬೈಲು ಬಳಿ ಚೆಕ್‍ಪೋಸ್ಟ್‍ನಲ್ಲಿ ಪೊಲೀಸರು ಕಾರು ತಡೆದು ಪರಿಶೀಲನೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿತ್ತು.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರನ್ನು ಬಂಧಿಸಿದ್ದು, ಕಾರು ಮತ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422