SHIVAMOGGA LIVE NEWS | 15 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಕುಮಾರ್ ಎಂಬುವವರು ವಿಮಾನ ನಿಲ್ದಾಣಕ್ಕೆ ತಮ್ಮ ಕಾರಿನಲ್ಲಿ ಟ್ಯಾಕ್ಸಿ ಸರ್ವಿಸ್ಸ್ ನೀಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ವಿಮಾನದಲ್ಲಿ ಬಂದ ಪ್ರಯಾಣಿಕರೊಬ್ಬರನ್ನು ಶಿವಮೊಗ್ಗಕ್ಕೆ ಡ್ರಾಪ್ ಮಾಡಿ, ವಿಮಾನ ನಿಲ್ದಾಣಕ್ಕೆ ಮರಳುತ್ತಿದ್ದರು. ಎನ್.ಟಿ.ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೆ ಹೊತ್ತಿಗೆ ಇನ್ನೊಂದು ಬೈಕ್‌ನಲ್ಲಿ ಬಂದ ಮತ್ತಿಬ್ಬರು ಯುವಕರು ಕಾರು ಚಾಲಕನಿಗೆ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಅಡಿಕೆ ತುಂಬಿದ್ದ ಬೊಲೇರೊ ಪಿಕಪ್ ಪಲ್ಟಿ, ಮೂವರು ಸಾವು
ಸುತ್ತಮುತ್ತಲ ಜನರು ಜಗಳ ಬಿಡಿಸಿದ್ದು, ಗಾಯಗೊಂಡಿದ್ದ ಚಾಲಕ ಶಿವಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಲ್ಲೆ ಮತ್ತು ಜೀವ ಬೆದರಿಕೆ ಒಡ್ಡಿದ ನಾಲ್ವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






